COVID 19 UPDATE | ಕಳೆದ 24 ಗಂಟೆಗಳಲ್ಲಿ 2.64 ಲಕ್ಷ ಕೊರೊನಾ ಕೇಸ್ covid-19-cases update-in india Saaksha tv
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಹವಾ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,64,202 ಸೋಂಕಿತರು ಪತ್ತೆಯಾಗಿದ್ದಾರೆ.
ಇದೇ ಅವಧಿಯಲ್ಲಿ ಕೊರೊನಾ ಸೋಂಕಿಗೆ 315 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದಲ್ಲದೇ ನಿನ್ನೆ ಒಂದು ದಿನದಲ್ಲಿ 1,09,345 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,48,24,706 ಕ್ಕೆ ಬಂದಿದೆ.
ದೇಶದಲ್ಲಿನ್ನೂ 12,72,073 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 3.48ರಷ್ಟು ಮಂದಿ ಸಕ್ರಿಯ ಸೋಂಕಿತರಿದ್ದಾರೆ.
ಇತ್ತ ದೇಶದಲ್ಲಿ ಈವರೆಗೆ 5,753 ಮಂದಿಯಲ್ಲಿ ಒಮಿಕ್ರಾನ್ ಸೋಂಕು ಕಂಡುಬಂದಿದೆ.









