ಶಾಕಿಂಗ್ : 2 ರಿಂದ 4 ವಾರದ ಒಳಗಡೆ ಕೋವಿಡ್ 3ನೇ ಅಲೆ – 2ನೇ ಅಲೆಗಿಂತ ಹೆಚ್ಚು ಆತಂಕಕಾರಿ…!
ಮುಂಬೈ: ಕೋವಿಡ್ 2ನೇ ಅಲೆ ಇನ್ನೇನು ಕಡಿಮೆಯಾಗ್ತಿದೆ ಅನ್ನೋ ಸಮಾಧನದಲ್ಲಿದ್ದ ಜನರಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.. ಇನ್ನೂ 2-4 ವಾರಗಳಲ್ಲಿ ಕೊರೊನಾ 3ನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಹೌದು.. ಒಂದು ವೇಳೆ ಸರಿಯಾಗಿ ಕೊರೊನಾ ನಿಯಮಗಳನ್ನು ಪಾಲಿಸದೇ ಇದ್ದರೆ ಮುಂದಿನ 2- 4 ವಾರಗಳ ಒಳಗಡೆ ಕೋವಿಡ್ ಮೂರನೇ ಅಲೆಯು ಅಪ್ಪಳಿಸಲಿದ್ದು, ಮೊದಲಿಗೆ ಹಾಗೂ ಮುಖ್ಯವಾಗಿ ಮಹಾರಾಷ್ಟ್ರವನ್ನೇ ಅದ್ರಲ್ಲೂ ಮುಂಬೈನಗರಿಯನ್ನ ಬಾಧಿಸಲಿದೆ ಎನ್ನಲಾಗಿದೆ.
ಇನ್ನೂ ಆತಂಕಕಾರಿ ವಿಚಾರ ಎಂದ್ರೆ ಕೋವಿಡ್ 3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎನ್ನಲಾಗ್ತಿದೆ.. ಈ ನಡುವೆ ಸಮಾಧಾನದ ಸಂಗತಿಯೊಂದು ಸಿಕ್ಕಿದೆ. ಅದೇನೆಂದ್ರೆ ಮಕ್ಕಳಿಗೆ ಹೆಚ್ಚಿನ ಸಮಸ್ಯೆ ಆಗುವುದಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ. ಅಲ್ಲದೇ ಎರಡನೆಯ ಅಲೆಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗಿಂತ ಎರಡು ಪಟ್ಟು ಹೆಚ್ಚು ಪ್ರಕರಣಗಳು 3ನೇ ಅಲೆಯಲ್ಲಿ ದಾಖಲಾಗುವ ಸಾಧ್ಯತೆಯಿದೆ ಎಂದು ಸಮಿತಿ ಎಚ್ಚರಿಕೆ ನೀಡಿದೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ..








