ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ..! Covid 19 | Good news for hotel owners saaksha tv
ಬೆಂಗಳೂರು : : ಕೊರೊನಾ ಸೋಂಕು ಮೂರನೇ ಅಲೆ ವೇಗವಾಗಿ ಹರಡುತ್ತಿದ್ದ ಕಾರಣ ಸೋಂಕು ತಡೆಗೆ ಹೋಟೆಲ್, ಪಬ್ ರೆಸ್ಟೋರೆಂಟ್ ಗಳಿಗೆ 50 : 50 ರೂಲ್ಸ್ ತರಲಾಗಿತ್ತು. ಆದರೇ ಇದಕ್ಕೆ ಹೋಟೆಲ್ ಮಾಲೀಕರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ರಾಜ್ಯ ಸರ್ಕಾರ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಜನವರಿ 31 ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಜೊತೆಗೆ ಜನವರಿ 31 ರಿಂದ ಬಸ್ ವ್ಯವಸ್ಥೆ ಎಂದಿನಂತೆ ಇರಲಿದ್ದು, ಹೋಟೆಲ್, ರೆಸ್ಟೋರೆಂಟ್ ಗಳಿಗೆ ಯಾವುದೇ ನಿರ್ಬಂಧ ಇಲ್ಲ. ಎಂದಿನಂತೆ ಮುಕ್ತ ಅವಕಾಶ ಇರಲಿದೆ ಎಂದು ತಿಳಿಸಿದರು.