ಆರೋಗ್ಯ ಇಲಾಖೆಯ ಆತಂಕ ಹೆಚ್ಚಿಸುತ್ತಿದೆ ಕರೋನಾ ಹೆಚ್ಚಳದ ಪ್ರಮಾಣ….
ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ಆರೋಗ್ಯ ಇಲಾಖೆಯ ಆತಂಕವನ್ನ ಹೆಚ್ಚಿಸುತ್ತಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 5233 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ಅಂದರೆ 07 ಮಂಗಳವಾರದಂದು 3741 ಪ್ರಕರಣಗಳು ದಾಖಲಾಗಿದ್ದವು. ಒಂದೇ ದಿನದಲ್ಲಿ ಕರೋನಾ ರೋಗಿಗಳ ಸಂಖ್ಯೆ ಸುಮಾರು 40% ಹೆಚ್ಚಳವಾಗಿದೆ.
ಹಲವು ತಿಂಗಳ ನಂತರ ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಸಕ್ರಿಯ ರೋಗಿಗಳ ಸಂಖ್ಯೆಯಲ್ಲಿಯೂ ಭಾರಿ ಏರಿಕೆ ಕಂಡುಬಂದಿದೆ. ಇದೀಗ ದೇಶದಲ್ಲಿ 28857 ಸಕ್ರಿಯ ಕರೋನಾ ಸೋಂಕಿತರಿದ್ದಾರೆ.
ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3345 ಜನರು ಕರೋನಾದಿಂದ ಗುಣಮುಖರಾಗಿದ್ದಾರೆ ಮತ್ತು ಏಳು ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 5,24,715 ಕ್ಕೆ ತಲುಪಿದೆ.
.








