ದೇಶದಲ್ಲಿಂದು 3,29,942 ಮಂದಿಗೆ ಸೋಂಕು, 3,876 ಬಲಿ covid-19
ನವದೆಹಲಿ : ಭಾರತದಲ್ಲಿಂದು ಕೊರೊನಾ ಅಬ್ಬರ ತುಸು ಕಗ್ಗಿದಂತೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಕಳೆದೊಂದು ವಾರಕ್ಕೆ ಹೋಲಿಸಿದರೆ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು,
3,876 ಮಂದಿ ಮಾರಕ ಸೋಂಕಿನಿಂದ ಉಸಿರು ನಿಲ್ಲಿಸಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2,29,92,517 ಹಾಗೂ ಮೃತರ ಸಂಖ್ಯೆ 2,49,992ಕ್ಕೆ ಹೆಚ್ಚಳವಾಗಿದೆ.
ಇನ್ನು ನಿನ್ನೆ ಒಂದೇ ದಿನ 3,56,082 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 1,90,27,304 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಭಾರತದಲ್ಲೀಗ 37,15,221 ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.










