ಭಾರತದಲ್ಲಿ ಕೊರೊನಾ ರಣಕೇಕೆ… ಒಂದೇ ದಿನ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು…? ಬಲಿಯಾದವರೆಷ್ಟು..?
ನವದೆಹಲಿ: ಭಾರತದಲ್ಲಿ ಕೊರೊನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, 2 ಅಲೆ ಭೀತಿಯಲ್ಲಿ ಜನರಿದ್ದಾರೆ. ಈ ನಡುವೆ ಕಳೆದ 24 ಗಂಟೆಗಳಲ್ಲೇ ದೇಶದಲ್ಲಿ ಬರೋಬ್ಬರಿ 96,982 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,26,86,049ಕ್ಕೆ ಏರಿಕೆಯಾಗಿದೆ.
ಇನ್ನೂ ಕಳೆದ 24 ಗಂಟೆಯಲ್ಲಿ 446 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,65,547 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 7,88,223 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,17,32,279 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 50,143 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.