ಅಮೆರಿಕ ಕೋವಿಡ್-19 ವೈರಸ್ ಸೋಂಕಿನಿಂದ ನಲುಗಿಹೋಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯ ಅವಧಿಯಲ್ಲಿ ಸುಮಾರು 1,480 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ ಅಮೆರಿಕಾದಲ್ಲಿ 2,73,880 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 7,046 ಮಂದಿ ಸಾವನ್ನಪ್ಪಿದಾರೆ ಎಂದು ವರದಿಗಳು ತಿಳಿಸಿವೆ.
ಅಮೆರಿಕಾದ ವಿಜ್ಞಾನಿಗಳು ಕೊರೊನಾ ವೈರಸ್ ಉಸಿರಾಡುವಾಗ, ಮಾತನಾಡುವಾಗ ಕೂಡ ಹರಡುತ್ತದೆ ಎಂದು ತಿಳಿಸಿದ್ದಾರೆ ಮಾತ್ರವಲ್ಲ ಜಗತ್ತಿನಾದ್ಯಂತ ಜನರಿಗೆ ಸಾಮಾನ್ಯ ಉಸಿರಾಟದ ಮೂಲಕವೇ ಈ ವೈರಸ್ ಹರಡುತ್ತದೆ ಎಂದು ಹೇಳಿದ್ದಾರೆ.
ತನ್ನ ನಾಗರಿಕರಿಗೆ ಸಾವರ್ಜನಿಕವಾಗಿ ಸಂಚಾರ ಮಾಡುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಿಕೊಳ್ಳುವಂತೆ ಅಮೆರಿಕ ಸರಕಾರ ಆದೇಶ ನೀಡಿದೆ.
ವಿಶ್ವದಾದ್ಯಂತ 1 ಮಿಲಿಯನ್ ಗಿಂತಲೂ ಅಧಿಕ ಜನರಿಗೆ ಕೊರೊನಾ ಸೋಂಕು ತಗುಲಿದ್ದು, 50 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








