ನವದೆಹಲಿ : ಭಾರತದಲ್ಲಿ ಕೊರೊನಾ ರಣಕೇಕೆ ಹಾಕುತ್ತಾ ಸಾಗಿದ್ದು, ಸದ್ಯ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 97,894 ಹೊಸ ಪ್ರಕರಣಗಳು ದೃಢಪಟ್ಟಿದ್ದು, 1,132 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 51,18,254 ಕ್ಕೆ ಹೆಮ್ಮಾರಿಯಿಂದ ಮೃತಪಟ್ಟಿರುವ ಸಂಖ್ಯೆ 83,198ಕ್ಕೆ ತಲುಪಿದೆ.
ಇನ್ನು ದೇಶದ ಒಟ್ಟು 51,18,254 ಸೋಂಕಿತರ ಪೈಕಿ ಈವರೆಗೆ 40,25,080 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 10,09,976 ಜನರಿಗೆ ಚಿಕಿತ್ಸೆ ಮುಂದುವರಿದಿದೆ.
ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 6,05,65,728 ಜನರಿಗೆ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಕಳೆದ 24ಗಂಟೆಗಳಲ್ಲಿ 11,36,613 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ.