ದೇಶದಲ್ಲಿ ಕೋವಿಡ್ ( covid 19 )
ಮರಣ ಪ್ರಮಾಣ ಶೇ.1.41ಕ್ಕೆ ಇಳಿಕೆ
ನವದೆಹಲಿ : ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಬಿರುಸಿನಿಂದ ಸಾಗಿದ್ದು, ಜನವರಿ 16ರಿಂದ ಈವರೆಗೆ ಒಟ್ಟು 1,66,16,048 ಮಂದಿಗೆ ಲಸಿಕೆ ನೀಡಲಾಗಿದೆ.
ಕೊರೊನಾ ರೂಪಾಂತರಿ ವೈರಸ್ ದೇಶದಲ್ಲಿ ಅಬ್ಬರಿಸುತ್ತಿರುವ ನಡುವೆಯೇ ಮರಣ ಪ್ರಮಾಣ ಶೇಕಡಾ 1.41ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 17,407 ಸೋಂಕಿತರು ಪತ್ತೆಯಾಗಿದ್ದು, ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 1,11,56,923ಕ್ಕೆ ತಲುಪಿದೆ.
ನಿನ್ನೆ 89 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಒಟ್ಟಾರೆ ಮೃತರ ಸಂಖ್ಯೆ 1,57,435ಕ್ಕೆ ಏರಿಕೆಯಾಗಿದೆ.
ಇನ್ನು ಒಟ್ಟಾರೆ ಕೊರೊನಾ ಸೋಂಕಿತರ ಪೈಕಿ ಶೇ.97.3 ರಷ್ಟು ಅಂದರೆ 1,08,26,075 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಳಿದಂತೆ ಶೇ.1.55 ರಷ್ಟು (1,73,413) ಕೇಸ್ ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.