COVID-19 : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 3,016 ಕ್ಕೆ ಏರಿಕೆ…
ಕೊರೊನಾ ಮತ್ತೆ ತನ್ನ ಕದಂಬಬಾಹುವನ್ನ ವಿಸ್ತರಿಸುತ್ತಿರುವಂತೆ ಕಾಣಿಸುತ್ತಿದೆ. ದಿನದಿಂದ ದಿನಕ್ಕೆ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ದಿನವೊಂದಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಸಾವಿರ ತಲುಪುತ್ತಿದೆ. ಕಳೆದ 24 ಗಂಟೆಗಳಲ್ಲಿ 3,016 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇದೀಗ ಕೋವಿಡ್ -19 ಪ್ರಕರಣಗಳ ಸಂಖ್ಯೆ 24 ಗಂಟೆಗಳಲ್ಲಿ ಸುಮಾರು 40 % ಹೆಚ್ಚಾಗಿದೆ. ದೇಶದಲ್ಲಿ 13,509 ಜನರು ಕೋವಿಡ್ ನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ಪಾಸಿಟಿವಿಟಿ ದರ ಶೇ.2.73ಕ್ಕೆ ತಲುಪಿದೆ.
ಕೇಂದ್ರ ಆರೋಗ್ಯ ಸಚಿವಾಲಯವು ಬಹಿರಂಗಪಡಿಸಿದ ವಿವರಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ -19 ನಿಂದ 14 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಈಗಾಗಲೇ 5,30,862 ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಮೂವರು ಮತ್ತು ದೆಹಲಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಕೋವಿಡ್ ಪ್ರಕರಣಗಳ ಚೇತರಿಕೆ ಪ್ರಮಾಣ 98.78 ಪ್ರತಿಶತ. ಒಂದು ವಾರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗಿರುವುದು ಆತಂಕಕಾರಿಯಾಗಿದೆ. ಮತ್ತೊಂದೆಡೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 300 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
COVID-19: Number of Covid cases in the country rises to 3,016…