ಕಿಕ್ಕೇರಿಯ ಮಾರುಕಟ್ಟೆಯಲ್ಲಿ ಕೋವಿಡ್ ನಿಯಮ ಮಾಯ

1 min read
Covid 19 rule disappears in Mandya saaksha tv

ಕಿಕ್ಕೇರಿಯ ಮಾರುಕಟ್ಟೆಯಲ್ಲಿ ಕೋವಿಡ್ ನಿಯಮ ಮಾಯ

ಮಂಡ್ಯ : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಜೋರಾಗಿರುವುದರಿಂದ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದೆ.

ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

Covid 19 rule disappears in Mandya saaksha tv

ಆದ್ರೂ  ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನೂರಾರು ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ  ಮತ್ತು ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಹಬ್ಬದ ಸಂಭ್ರಮದಲ್ಲಿ ಸಾಮಗ್ರಿ ಕೊಳ್ಳಲು ಮುಗಿಬಿದ್ದಿದ್ದಾರೆ.

ಇಂದು ಮುಂಜಾನೆಯಿಂದಲೂ ಕಿಕ್ಕೇರಿ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ಮತ್ತು ಪೊಲೀಸ್ ಸಿಬ್ಬಂದಿಗಳಿಂದ ಮಾಸ್ಕ್ ಮತ್ತು ಸಾಮಾಜಿಕ ಅಂತರದ ಬಗ್ಗೆ ಅರಿವು ಮೂಡಿಸಿದ್ರೂ ಜನರು  ಕ್ಯಾರೆ ಎನ್ನುತ್ತಿಲ್ಲ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd