ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮಕಾರಿ ಎನ್ನುವುದು ಎಷ್ಟು ನಿಜ…?
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಕೊಂಚ ಇಳಿಕೆಯಾಗ್ತಿದ್ದು, ನಿರಾಳರಾಗುತ್ತಿದ್ದವರಿಗೆ ಮುಂದೆ ಕೊರೊನಾ 3ನೇ ಅಲೆಯ ಆತಂಕವೂ ಎದುರಾಗಿದೆ.. ಕೊರೊನಾ 3ನೇ ಅಲೆ ಅತಿ ಭಯನಾಕವಾಗಿರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.. ಇನ್ನೂ ಆತಂಕಕಾರಿ ಸಂಗತಿ ಎಂದ್ರೆ 3ನೇ ಅಲೆಯಲ್ಲಿ ಮಕ್ಕಳೇ ಹೆಚ್ಚಾಗಿ ಟಾರ್ಗೆಟ್ ಆಗಲಿದ್ದಾರೆ ಎನ್ನಲಾಗಿದೆ..
ಆದ್ರೆ ಮುಂದಿನ ಅಲೆ ಅಥವಾ ಮುಂಬರುವ ವಾರಗಳಲ್ಲಿ ಮಕ್ಕಳ ಮೇಲೆ ಕೊರೊನಾ ಹೆಚ್ಚು ಪ್ರಭಾವ ಬೀರಲಿದೆ ಎಂದು ಹೇಳಲು ಯಾವುದೇ ಕಾರಣಗಳಿಲ್ಲ. ಆದರೆ ಮಕ್ಕಳಿಗೆ ಸಂಬಂಧಿಸಿದ ಕೋವಿಡ್ ಸೇವೆಗಳಲ್ಲಿ ಸುಧಾರಣೆಗಳನ್ನು ತರಬೇಕಾಗಿದೆ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಕೋವಿಡ್ ವರ್ಕಿಂಗ್ ಗ್ರೂಪ್ ನ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ತಿಳಿಸಿದ್ದಾರೆ.
ಈಗಿನ ತಳಿಯು ಮಕ್ಕಳು ಮತ್ತು ಯುವಕರ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಭಾರತದ ಅಂಕಿಅಂಶಗಳು ಹೇಳುತ್ತಿಲ್ಲ. ಆದರೆ, ಇತ್ತೀಚಿಗೆ ಈ ವಯಸ್ಸಿನ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದನ್ನು ನಾವು ಗಮನಿಸಬಹುದು. ಈ ಸಂದರ್ಭದಲ್ಲಿ ಮೂರನೇ ಅಲೆಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ನವಜಾತ ಶಿಶು, ಮಕ್ಕಳು ಮತ್ತು ಗರ್ಭಿಣಿಯರ ಆರೈಕೆಗಾಗಿ ಸೌಲಭ್ಯಗಳನ್ನು ಹೆಚ್ಚಿಸುವ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸಂಘ–ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.