ಕೋವಿಡ್ 4ನೇ ಅಲೆ ಹಿನ್ನಲೆ – ಸಿ ಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ…
ಇತ್ತೀಚೆಗೆ ದೇಶದ ರಾಜಧಾನಿ ಸರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದೆ. ಸಾಂಭಾವ್ಯ ನಾಲ್ಕನೇ ಆಲೆ ತಡೆಯುವ ನಿಟ್ಟಿನಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಕರ್ನಾಟಕದಲ್ಲಿ ನಾಲ್ಕು ವಾರದ ಬಳಿಕ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಕಳೆದ ಎಂಟತ್ತು ದಿನಗಳಿಂದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಂಭವನೀಯ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಪ್ರಧಾನಿ ಅವರು ಸಲಹೆ -ಸೂಚನೆ ನೀಡಲಿದ್ದಾರೆ. ಆ ನಂತರ ರಾಜ್ಯ ಸರ್ಕಾರ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ ಸಿ ಎಂ ಬೊಮ್ಮಾಯಿ ನಿನ್ನೆ ಹುಬ್ಬಳ್ಳಿಯಲ್ಲಿ ತಿಳಿಸಿದರು.
ಇಂದು ಸಿ ಎಂ ಗೃಹ ಕಛೇರಿ ಕೃಷ್ಣದಲ್ಲಿ ನಡೆಯಲಿರುವ ಸಭೆಗೆ ಕಂದಾಯ ಸಚಿವ ಅಶೋಕ್, ಆರೋಗ್ಯ ಸಚಿವ ಡಾ. ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಸದಸ್ಯರು ಭಾಗಿಯಾಗಲಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ ಹೊಸ ರೋಗಿಗಳ ಸಂಖ್ಯೆ ದ್ವಿಗುಣಗೊಂಡಿದ್ದು, ದೇಶದಲ್ಲಿ ನಾಲ್ಕನೇ ಅಲೆಯ ಬಗ್ಗೆ ತಜ್ಞರು ಕಾದು ನೋಡುವ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ, ಕೆಲವು ರಾಜ್ಯಗಳು ಸ್ವಂ ಪ್ರೇರಿತವಾಗಿ ನಿರ್ಬಂಧಗಳನ್ನ ವಿಧಿಸಿಕೊಳ್ಳುತ್ತಿವೆ.