Covid case : ವಿದೇಶಗಳಲ್ಲಿ ಕರೋನಾ ಹೆಚ್ಚಳ – ರಾಜ್ಯಗಳಲ್ಲಿ ಟೆಸ್ಟಿಂಗ್ ಹೆಚ್ಚಿಸುವಂತೆ ಕೇಂದ್ರದ ಪತ್ರ…
ಚೀನಾ, ಜಪಾನ್, ಯುನೈಟೆಡ್ ಸ್ಟೇಟ್ಸ್, ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಗಳಲ್ಲಿಯೂ ಜೀನೋಮ್ ಪರೀಕ್ಷೆಯನ್ನ ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. …
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ದೇಶದಲ್ಲಿ ಚಲಾವಣೆಯಲ್ಲಿರುವ ರೂಪಾಂತರಗಳನ್ನ ಸಮಯೋಚಿತವಾಗಿ ಪತ್ತೆ ಹಚ್ಚಲು ಅನುಕೂಲವಾಗುವಂತೆ ಜೀನೋಮ್ ಪರೀಕ್ಷೆ ಯನ್ನ ಹೆಚ್ಚಿಸುವಂತೆ ತಿಳಿಸಿದ್ದಾರೆ.
ಎಲ್ಲಾ ಪಾಸಿಟೀವ್ ಪ್ರಕರಣಗಳ ಸಾಧ್ಯವಾದಷ್ಟು ಮಾದರಿಗಳನ್ನು ಪ್ರತಿದಿನ, ಗೊತ್ತುಪಡಿಸಿದ ಜಿನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಿಗೆ ಕಳುಹಿಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಪರೀಕ್ಷೆ, ಟ್ರ್ಯಾಕಿಂಗ್, ಚಿಕಿತ್ಸೆ, ಲಸಿಕೆ ಹಾಕುವುದು ಮತ್ತು ಕೋವಿಡ್ ಸೂಕ್ತ ನಡವಳಿಕೆಯನ್ನ ಅನುಸರಿಸುವ ಐದು ಪಟ್ಟು ಕಾರ್ಯತಂತ್ರದ ಮೇಲೆ ಭಾರತವು ತನ್ನ ಗಮನವನ್ನು ಕೇಂದ್ರೀಕರಿಸಿದ್ದು, COVID-19 ವೈರಸ್‌ನ ಪ್ರಸರಣವನ್ನು ನಿರ್ಬಂಧಿಸಲು ಸಾಧ್ಯವಾಗಿದೆ ಎಂದು ಕಾರ್ಯದರ್ಶಿ ಹೇಳಿದರು.
ಪ್ರಪಂಚದಾದ್ಯಂತ ಇನ್ನೂ ಕೋವಿಡ್ ಮುಂದುವರೆದಿದೆ, ವಾರಕ್ಕೆ ಸುಮಾರು 35 ಲಕ್ಷ ಪ್ರಕರಣಗಳು ವರದಿಯಾಗುತ್ತವೆ. ಭಾರತದಲ್ಲಿ ವಾರಕ್ಕೆ ಸುಮಾರು 1200 ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
Covid case: Corona increase in foreign countries – Center’s letter to increase testing in states…