Covid cases : ಚೀನಾದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ – ಕೇಂದ್ರ ಆರೋಗ್ಯ ಸಚಿವರ ಸಭೆ…
ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಆತಂಕವನ್ನ ತಂದೊಡ್ಡಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೋವಿಡ್ – 19 ಪ್ರಕರಣಗಳ ಏರಿಕೆಯನ್ನ ತಡೆಗಟ್ಟಲು ಉನ್ನತ ಅಧಿಕಾರಿಗಳು ಮತ್ತು ತಜ್ಞರ ಜೊತೆ ಉನ್ನತ ಮಟ್ಟದ ಪರಿಶೀಲನೆ ನಡೆಸಿದ್ದಾರೆ.
ಮುಂದಿನ ಮೂರು ತಿಂಗಳಲ್ಲಿ ಚೀನಾದ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಜನರು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ವೈದ್ಯಕೀಯ ತಜ್ಞರು ಭವಿಷ್ಯ ನುಡಿದಿದ್ದಾರೆ. ಸಭೆ ಮುಗಿದ ನಂತರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಮಾತನಾಡಿ “ಕೋವಿಡ್ ಇನ್ನೂ ಮುಗಿದಿಲ್ಲ. ನಾನು ಸಂಬಂಧಪಟ್ಟ ಎಲ್ಲರಿಗೂ ಎಚ್ಚರಿಕೆ ವಹಿಸಲು ಮತ್ತು ಕಣ್ಗಾವಲಿಡಲು ಸೂಚಿಸಿದ್ದೇನೆ” ಎಂದು ಹೇಳಿದರು.
ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜಿನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಲ್ಲಿ ಸಕಾರಾತ್ಮಕ ಪ್ರಕರಣ ಪರೀಕ್ಷೆ ಹೆಚ್ಚಿಸುವಂತೆ ಸೂಚಿಸಿದ್ದಾರೆ. “ಜಪಾನ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹಠಾತ್ ಹೆಚ್ಚಾಗುತ್ತಿದೆ.
Covid cases : Health Minister Mansukh Mandaviya held a meeting to review India’s Covid preparedness








