Corona update | ಕಳೆದ 24 ಗಂಟೇಲಿ 2,86,384 ಕೇಸ್ ಪತ್ತೆ
ಕೊರೊನಾ ಸೋಂಕಿಗೆ ಉಸಿರು ನಿಲ್ಲಿಸಿದ 573 ಮಂದಿ
3,06,357 ಮಂದಿ ಕೋವಿಡ್ ಸೋಂಕಿನಿಂದ ಚೇತರಿಕೆ
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 22,02,472
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2 ಲಕ್ಷದ 80 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ ಗಳು ಪತ್ತೆಯಾಗಿವೆ. covid cases in india in last 24 hours Saaksha tv
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಭಾರತದಾದ್ಯಂತ ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, ಇದೇ ಅವಧಿಯಲ್ಲಿ 573 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಸದ್ಯ ಪಾಸಿಟಿವಿಟಿ ದರ ಶೇಕಡಾ 19.59 ರಷ್ಟಿದ್ದು, ಕಳೆದ 24 ಗಂಟೆಯಲ್ಲಿ 3,06,357 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ಇದರೊಂದಿಗೆ ಈವರೆಗೆ ಒಟ್ಟು 3,76,77,328 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
573 ಮಂದಿ ಸಾವಿನೊಂದಿಗೆ ದೇಶದಲ್ಲಿ ಈವರೆಗೆ ಸುಮಾರು 4,91,700 ಮಂದಿ ಕೊರೊನಾಗೆ ಉಸಿರು ನಿಲ್ಲಿಸಿದ್ದಾರೆ. covid cases in india in last 24 hours Saaksha tv
ಇವತ್ತಿನ ಕೊರೊನಾ ಕೇಸ್ ಗಳೊಂದಿಗೆ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 22,02,472 ಕ್ಕೆ ತಲುಪಿದೆ.









