ಕೋವಿಡ್ ಸಂಖ್ಯೆಯಲ್ಲಿ ದಿಢೀರ್ ಏರಿಕೆ – 2,183 ಹೊಸ ಪ್ರಕರಣ ಪತ್ತೆ…
ದೇಶದಲ್ಲಿ ಕೊರೋನಾ ಸೋಂಕುಗಳ ಮತ್ತೆ ದಿಢೀರ್ ಏರಿಕೆಯಾಗುತ್ತಿದ್ದು, ಭಾನುವಾರದ ಅಂಕಿ ಅಂಶಗಳಿಗೆ ಹೋಲಿಸಿದರೇ ಒಂದೇ ದಿನಕ್ಕೆ 90% ಸೋಂಕು ಹೆಚ್ಚಾಗಿರುವುದು ಕಂಡು ಬಂದಿದೆ. ದೇಶದಲ್ಲಿ ಸೋಮವಾರದ 2,183 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, 214 ಮಂದಿ ಸಾವನ್ನಪ್ಪಿದ್ದಾರೆ. ಈ ತಿಂಗಳಲ್ಲಿ ಇದೇ ಮೊದಲ ಭಾರಿಗೆ ಇಷ್ಟೊಂದು ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,44,280ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,967ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,542ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1985 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆಯಾಗಿ ಇಲ್ಲಿಯವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,10,773ಕ್ಕೆ ತಲುಪಿದೆ.
ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಕೋವಿಡ್ XE ರೂಪಾಂತರದ ಬಗ್ಗೆ ಎಚ್ಚರಿಕೆಯನ್ನು ನೀಡಿತು, ಅದರಲ್ಲಿ ಎರಡು ಪ್ರಕರಣಗಳು ಮುಂಬೈ ಮತ್ತು ಗುಜರಾತ್‌ನಲ್ಲಿ ವರದಿಯಾಗಿದೆ.