ಶಿವಮೊಗ್ಗ : ಸಾಗರ ಶಾಸಕ ಹರತಾಳು ಹಾಲಪ್ಪ ಅವರಿಗೆ ಕೊರೊನಾ ಸೋಂಕಿರುವುದ ದೃಡಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಾಸಕ ಹಾಲಪ್ಪ ಅವರ ಪತ್ನಿ, ಕಾರು ಚಾಲಕ ಹಾಗೂ ಓರ್ವ ಸಿಬ್ಬಂದಿಗೆ ಕೂಡಾ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಗೆ ಸೋಂಕು ತಾಗಿರುವ ಕಾರಣದಿಂದ ತಮ್ಮ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಹಾಲಪ್ಪ ಮನವಿ ಮಾಡಿದ್ದಾರೆ.
ಹರತಾಳು ಹಾಲಪ್ಪ ಅವರನ್ನು ಎಂಎಸ್‌ಐಎಲ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಜುಲೈ 30ರಂದು ಅವರು ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕಾರ ಮಾಡಿದ್ದರು.