ಇಸ್ರೇಲ್ ನಲ್ಲಿ ಇಳಿಕೆಯಾದ ಕೋವಿಡ್ ಪ್ರಕರಣಗಳು – ಕೊರೊನಾ ನಿಯಮಗಳಲ್ಲಿ ಸಡಿಲಿಕೆ..!
ಇಸ್ರೇಲ್ ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಸ್ರೇಲ್ ಆರೋಗ್ಯ ಸಚಿವ ಯುಲಿ ಎಡೆಲ್‌ಸ್ಟೇನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. ಈ ನಿಯಮವನ್ನು ಅಂತ್ಯಗೊಳಿಸುವ ಬಗ್ಗೆ ಮುಂದಿನ ಎರಡು ವಾರಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವ ಚಿಂತನೆ ನಡೆಸಿದೆ ಇಸ್ರೇಲ್ ಸರ್ಕಾರ.
ಇನ್ನೂ ರೆಸ್ಟೋರೆಂಟ್ ಮತ್ತು ಮನರಂಜನಾ ಸ್ಥಳಗಳಲ್ಲಿ ಲಸಿಕೆ ಪ್ರಮಾಣ ಪತ್ರ ಕಡ್ಡಾಯವಾಗಿತ್ತು. ಇದೀಗ ಈ ನಿಯಮವನ್ನು ತೆಗೆದು ಹಾಕಲಾಗಿದ್ದು, ವ್ಯವಹಾರಗಳಲ್ಲಿ ಜನರ ಪಾಲ್ಗೊಳ್ಳುವಿಕೆ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಕೂಡ ತೆರವುಗೊಳಿಸಲಾಗಿದೆ.
ವಿದೇಶಿ ಪ್ರಯಾಣಿಕರ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರಿಸಲಾಗಿದೆ. ಆದರೆ ಇಸ್ರೇಲ್ ನಾಗರಿಕರ ಹತ್ತಿರದ ಸಂಬಂಧಿಕರು, ತಜ್ಞರು ಮತ್ತು ಕೆಲವು ಪ್ರವಾಸಿಗರಿಗೆ ವಿನಾಯಿತಿ ನೀಡಲಾಗಿದೆ. ಇಸ್ರೇಲ್‌ನಲ್ಲಿ ಮಂಗಳವಾರ ಕೇವಲ 4 ಹೊಸ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು 350 ಪ್ರಕರಣಗಳಿವೆ. ಈ ಬದಲಾವಣೆಗೆ ಲಸಿಕೆ ಅಭಿಯಾನವೇ ಕಾರಣ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.