ಲಾಕ್ ಡೌನ್ ಹೆಸರೇಳದೇ ಕರುನಾಡು ಲಾಕ್ ಡೌನ್..?!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸದ್ಯ 50:50 ರೂಲ್ಸ್ ತಂದಿದೆ.
ಜೊತೆಗೆ ವೀಕೆಂಡ್ ಕರ್ಫ್ಯೂ ವಿಧಿಸಿದೆ. ಆದ್ರೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ, ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಇದೇ ಕಾರಣಕ್ಕಾಗಿ ಇಂದು ಸಿಎಂ ಸಲಹಾ ಸಮಿತಿಯ ಜೊತೆಗೆ ಚರ್ಚೆ ನಡೆಸಲಿದ್ದಾರೆ.
ಮೂಲಗಳ ಪ್ರಕಾರ ಪ್ರಸ್ತುತ ರಾಜ್ಯದಲ್ಲಿರುವ ನಿಯಮಗಳನ್ನೇ ಜನವರಿ 31 ರವರೆಗೂ ಮುಂದುವರೆಸುವ ಸಾಧ್ಯತೆಗಳಿವೆ.
ಮುಂದಿನ 2 ವಾರಗಳ ಕಾಲ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ವನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ಮೊದಲ ವಾರ ರಾಜ್ಯದಲ್ಲಿ ಕೊರೊನಾ ಸೋಂಕು ಪೀಕ್ ಗೆ ಹೋಗುವ ಸಾಧ್ಯತೆಗಳಿವೆ.
ಹೀಗಾಗಿ ಸದ್ಯ ಜಾರಿಯಲ್ಲಿರುವ ನಿಯಮಗಳನ್ನೇ ಮತ್ತಷ್ಟು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸಲಹಾ ಸಮಿತಿ ಸಿಎಂಗೆ ಸಲಹೆ ನೀಡಬಹುದು.
ಇದು ಒಂದು ಕಡೆಯಾದರೇ ಫೆಬ್ರವರಿ ಸೋಂಕು ಹೆಚ್ಚಾಗುವ ಸಾಧ್ಯತೆಗಳಿರುವ ಕಾರಣ, ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ನಂತಹ ನಿಯಮ ಜಾರಿಗೆ ಬರುವ ಸಾಧ್ಯತೆಗಳಿವೆ.









