ಕೊರೊನಾ ಲಾಕ್ ಡೌನ್ ಗೂ ಜನ ಡೋಂಟ್ ಕೇರ್ – ಬೀದರ್ ನಲ್ಲಿ ಬೇಕಾಬಿಟ್ಟಿ ವಾಹನಗಳ ಸಂಚಾರ
ಬೀದರ್ : ದೇಶ ಹಾಗೂ ರಾಜ್ಯದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ.
ಈ ನಡುವೆ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿ ಕಠಿಣ ನಿಯಮಗಳನ್ನ ತಂದಿದೆ.. ಆದ್ರೆ ಜನ ಮಾತ್ರ ಇದ್ಯಾವದಕ್ಕೂ ಡೋಂಟ್ ಕೇರ್ ಎನ್ನುತ್ತಾ ಸುಖಾಸುಮ್ಮನೆ ರಸ್ತೆಯಲ್ಲಿ ಗುಂಪು ಗುಂಪಾಗಿ ಓಡಾಡುತ್ತಿರುವುದು ಅಲ್ಲದೇ , ಮಾಸ್ಕ್ ಗಳ ವಿಷಯದಲ್ಲಿ ಬೇಜವಾಬ್ದಾರಿ ತೋರುಸುತ್ತಾ ತಮ್ಮ ಜೀವಕ್ಕೂ ಆಪತ್ತು ತಂದುಕೊಳ್ಳು ಜೊತೆಗೆ ಇತರರ ಆರೋಗ್ಯಕ್ಕೂ ತೊಂದರೆ ಉಂಟುಮಾಡ್ತಿರುವುದು ಅಲ್ಲಲ್ಲಿ ಕಂಡು ಬರುತ್ತಿದೆ.
ಬೀದರ್ ನ ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತದಲ್ಲಿ ಇಂತಹದ್ದೇ ದೃಶ್ಯಗಳು ಕಂಡುಬಂದಿದೆ. ಒಂದೆಡೆ ಪೊಲೀಸರು ಪ್ರತಿ ವಾಹನಗಳನ್ನ ತೀವ್ರ ತಪಾಸಣೆ ನಡೆಸುತ್ತಿದ್ದು, ಸುಖಾ ಸುಮ್ಮನೆ ರಸ್ತೆಗಿಳಿಯುತ್ತಿರುವ ವಾಹನಗಳ ಜಪ್ತಿಗಹೂ ಮುಂದಾಗಿದ್ದಾರೆ.
ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿ ಅವಕಾಶ ನೀಡಲಾಗಿದೆ.. ಆದ್ರೆ ಹೀಗೆ ನೀಡಲಾಗಿರುವ ಅವಕಾಶವನ್ನ ಜನ ದುರುಪಯೋಗ ಪಡೆಸಿಕೊಳ್ತಿದ್ದಾರೆ. ಬೇಕಾಬಿಟ್ಟಿ ಮಾಸ್ಕ್ ಗಳನ್ನ ಧರಿಸದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮಾರುಕಟ್ಟೆಗಳಲ್ಲಿ ಜಾತ್ರೆಯಂತೆ ಓಡಾಟ ನಡೆಸಿದ್ದಾರೆ. ಮತ್ತೊಂದೆಡೆ ನಗರದ ಬಿವಿಬಿ ಕಾಲೆಜ ರಸ್ತೆ. ಗಂಜ ರಸ್ತೆಯಲ್ಲಿ ವಾಹನ ದಟ್ಟಣೆಯೂ ಹೆಚ್ಚಾಗಿದ್ದ ದೃಶ್ಯ ಕಂಡುಬಂದಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








