Covid-19 Update | ಇಂದು ದೇಶದಲ್ಲಿ 1,68,063 ಮಂದಿಗೆ ಸೋಂಕು
ನವದೆಹಲಿ : ದೇಶದಲ್ಲಿ ಕೊರೊನಾ ಮೂರನೇ ಅಲೆಯ ಆಟ ಶುರುವಾಗಿದ್ದು, ಹೆಮ್ಮಾರಿ ಸೋಂಕು ಸಿಕ್ಕ ಸಿಕ್ಕವರ ದೇಹ ಹೊಕ್ಕಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,68,063 ಮಂದಿಗೆ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ 277 ಮಂದಿ ಮಹಾಮಾರಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಇದಲ್ಲದೇ 69,959 ಜನರು ವೈರಸ್ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಸದ್ಯ ಪಾಸಿಟಿವ್ ದರ ಶೇ. 13.29 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಇವತ್ತಿನ ಕೊರೊನಾ ಸೋಂಕು ಪ್ರಕರಣಗಳೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,58,75,790ಕ್ಕೆ ಏರಿಕೆಯಾಗಿದೆ.
ಒಟ್ಟು 4,84,213 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಸದ್ಯ 8,21,446 ಸಕ್ರಿಯ ಪ್ರಕರಣಗಳಿವೆ. ಈ ವರೆಗೂ ದೇಶದಲ್ಲಿ 34,570,131 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.