ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೊರೊನಾ ಪಾಸಿಟಿವ್ Saaksha Tv
ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.
ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಜೆಸಿ ಮಾಧುಸ್ವಾಮಿ, ಬಿ.ಸಿ.ನಾಗೇಶ್ ಸೇರಿದಂತೆ ಅನೇಕರಿಗೆ ಕೊರೋನಾ ಸೋಂಕು ತಗುಲಿತ್ತು. ಈಗ ಗುಣಮುಖರು ಆಗಿದ್ದಾರೆ. ಇದೀಗ ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.









