ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ಈ ಬಾರಿ ಬೆಂಗಳೂರಿನಲ್ಲಿ ಹೊಸದಾಗಿ 73 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮಹದೇವಪುರ ವಲಯದಲ್ಲಿ ಅತ್ಯಧಿಕ ಪ್ರಕರಣಗಳು ವರದಿಯಾಗಿವೆ.
ಪ್ರದೇಶವಾರು ಕೊರೊನಾ ಪಾಸಿಟಿವ್ ಪ್ರಕರಣಗಳ ವಿವರ:
ಮಹದೇವಪುರ – 16 ಕೇಸ್‌ಗಳು
ಬೆಂಗಳೂರು ದಕ್ಷಿಣ – 14
ಬೆಂಗಳೂರು ಪೂರ್ವ – 13
ಬೆಂಗಳೂರು ಪಶ್ಚಿಮ – 10
ಬೊಮ್ಮನಹಳ್ಳಿ – 7
ಬೆಂಗಳೂರು ಕೇಂದ್ರ – 5
ಯಲಹಂಕ – 4
ದಾಸರಹಳ್ಳಿ – 1
ರಾಜರಾಜೇಶ್ವರಿ ನಗರ – 1
ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೆಚ್ಚು ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುತ್ತಿದೆ. ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕರೆ ನೀಡಿದ್ದಾರೆ. ಜನಸಂಚಾರ ಇರುವ ಕಡೆಗಳಲ್ಲಿ ಮಾಸ್ಕ್ ಧರಿಸುವುದು ಶಾರೀರಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯವೆಂದು ಮನವಿ ಮಾಡಲಾಗಿದೆ.








