ಕೋವಿಡ್ ಅಪ್ಡೇಟ್ – ದೇಶದಲ್ಲಿಂದು 15,789 ಕರೋನಾ ಪ್ರಕರಣ ಪತ್ತೆ…
ದೇಶದಲ್ಲಿ ಕೊರೊನಾ ಹಾವಳಿ ಮತ್ತೊಮ್ಮೆ ಹೆಚ್ಚಾಗುತ್ತಿದೆ ಎನ್ನುವಂಥಹ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 15,789 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ಶುಕ್ರವಾರ ಕೋವಿಡ್ ನಿಂದಾಗಿ 20 ರೋಗಿಗಳು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೊನಾ ಪಾಸಿಟಿವ್ ದರ ಶೇ.4.32ಕ್ಕೆ ಏರಿಕೆಯಾಗಿದೆ.
ಇದಕ್ಕೂ ಮುನ್ನ ಗುರುವಾರ 17,336 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13 ಮಂದಿ ಸಾವನ್ನಪ್ಪಿದ್ದರು. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ, ಅಂದರೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ 90,272 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 12,357 ರೋಗಿಗಳು ಚೇತರಿಸಿಕೊಂಡಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,78,234ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,974ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 12,425 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,61,481ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,01,649 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,98,95,036 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,96,77,33,217 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.