ಕಳೆದ 24 ಗಂಟೆಗಳಲ್ಲಿ 9,436 ಹೊಸ ಪ್ರಕರಣ ಪತ್ತೆ…
ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ಪ್ರಕಟಿಸಿದ ಅಂಕಿ ಅಂಶಗಳ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದೆ. ದೇಶಾದ್ಯಾಂತ ಇಲ್ಲಿಯವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 86,591ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 30 ಮಂದಿ ಮೃತಪಟ್ಟಿದ್ದಾರೆ. ಸಾಂಕ್ರಾಮಿಕತೆ ಶುರು ಆದಾಗಿನಿಂದ ಇಲ್ಲಿಯವರೆಗೆ ಒಟ್ಟಾರೇ ಮೃತರ ಸಂಖ್ಯೆ 5,27,754ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆ ದರವು ಶೇ 98.62ರಷ್ಟಿದೆ. ಈವರೆಗೆ 4,37,93,787 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 211.66 ಕೋಟಿ ಕೋವಿಡ್ ವಿರುದ್ಧದ ಲಸಿಕೆ ಡೋಸ್‌ಗಳನ್ನು ವಿಚರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.