Covid update – ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 92,576 ಕ್ಕೆ ಏರಿಕೆ..
ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಳಿತಗೊಳ್ಳುತ್ತಲೇ ಇವೆ. ಕಳೆದ 24 ಗಂಟೆಗಳಲ್ಲಿ 11,739 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 797 ಹೆಚ್ಚಳವಾಗಿದ್ದು, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 92,576 ಕ್ಕೆ ಏರಿಕೆಯಾಗಿದೆ.
ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಪಡಿಸಿದ ಮಾಹಿತಿಯ ಪ್ರಕಾರ, ದೇಶದಲ್ಲಿ ಒಟ್ಟು ಕರೋನಾ ಸೋಂಕಿತರ ಸಂಖ್ಯೆ 4,33,89,973 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 5,24,999 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 25 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಕೇರಳದಲ್ಲಿ 10, ದೆಹಲಿಯಲ್ಲಿ 6, ಮಹಾರಾಷ್ಟ್ರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ ಇಬ್ಬರು ಮತ್ತು ಹಿಮಾಚಲ, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕರೋನಾ ಲಸಿಕೆ ಅಭಿಯಾನ ಆರಂಭಿಸಿದಾಗಿನಿಂದ ಇಲ್ಲಿಯವರೆಗೆ ಒಟ್ಟು 197.08 ಕೋಟಿ ಡೋಸ್ ನೀಡಲಾಗಿದೆ.
ಶನಿವಾರ, ದೇಶದಲ್ಲಿ 15,940 ಹೊಸ ಕರೋನಾ ಸೋಂಕುಗಳು ಕಂಡುಬಂದಿದ್ದವು. ಶುಕ್ರವಾರ, 17,336 ಪ್ರಕರಣಗಳು, ಭಾನುವಾರ ಅಂದರೆ ಇಂದು 15,940 ಕ್ಕೆ ಮತ್ತಷ್ಟು ಕಡಿಮೆ ಪ್ರಕರಣಗಳು ವರದಿಯಾಗಿವೆ.








