Covid Update: ಕೋವಿಡ್ ಸಂಖ್ಯೆಯಲ್ಲಿ ಧಿಡೀರ್ ಏರಿಕೆ – 16 ಸಾವಿರ ಪ್ರಕರಣ ಪತ್ತೆ….
ಕಳೆದ 24 ಗಂಟೆಗಳಲ್ಲಿ ದೇಶದ ಕೋವಿಡ್ ಸಂಖ್ಯೆಗಳಲ್ಲಿ ದಿಢೀರ್ ಏರಿಕೆಯಾಗಿದೆ. 16,561 ಹೊಸ ಕೊರೊನಾ ಪ್ರಕರಣಗಳು ಇಂದು ವರದಿಯಾಗಿದೆ.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯ ನವೀಕರಿಸಿದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 18,053 ಜನರು ಕರೋನಾದಿಂದ ಚೇತರಿಸಿಕೊಂಡಿದ್ದಾರೆ. ಸದ್ಯಕ್ಕೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,23,535 ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 4,42,23,557 ಜನರಿಗೆ ಕರೋನಾ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಗಳಲ್ಲಿ 49 ಮಂದಿ ಸಾವನ್ನಪ್ಪಿದ್ದಾರೆ.ಇಲ್ಲಿಯವರೆಗೆ ಒಟ್ಟು ಸಾವುಗಳ ಸಂಖ್ಯೆ 5,26,928 ಕ್ಕೆ ಏರಿದೆ.
ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಅತಿ ಹೆಚ್ಚು 10 ಮಂದಿ ಸಾವನ್ನಪ್ಪಿದ್ದಾರೆ.
Corbevax ಲಸಿಕೆ ಬೂಸ್ಟರ್ ಡೋಸ್ ಇಂದಿನಿಂದ ಕರೋನಾ ಲಸಿಕೆ ಕೇಂದ್ರಗಳಲ್ಲಿ ಲಭ್ಯವಿರುತ್ತದೆ. ಕೋವಿನ್ ಅಪ್ಲಿಕೇಶನ್‌ನಲ್ಲಿ ಖಾಸಗಿ ಮತ್ತು ಸರ್ಕಾರಿ ರೋಗನಿರೋಧಕ ಕೇಂದ್ರಗಳಲ್ಲಿ ಇದರ ಲಭ್ಯತೆ ಗೋಚರಿಸುತ್ತದೆ. 10 ಕೋಟಿ ಡೋಸ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಸರಬರಾಜು ಮಾಡಲಾಗಿದೆ ಎಂದು ಲಸಿಕೆ ತಯಾರಕ ಬಯೋಲಾಜಿಕಲ್ ಇ ಲಿಮಿಟೆಡ್ ತಿಳಿಸಿದೆ.