12 -14 ವರ್ಷದ ಮಕ್ಕಳಿಗೆ ಇಂದಿನಿಂದ ಕೊರೊನಾ ಲಸಿಕೆ ಪ್ರಾರಂಭ – Saaksha Tv
ನವದೆಹಲಿ: ಇಂದಿನಿಂದ ದೇಶಾದ್ಯಂತ 12 ರಿಂದ 14 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.
ಸರಕಾರ ಮಕ್ಕಳಿಗೆ ಕಾರ್ಬೆವ್ಯಾಕ್ಸ್ ಲಸಿಕೆ ನೀಡಲು ನಿರ್ಧರಿಸಿದ್ದು, 12 ರಿಂದ 14 ವರ್ಷದ ಮಕ್ಕಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. 12 ರಿಂದ 13 ವರ್ಷ ಒಂದು ಗುಂಪು ಹಾಗೂ 13ರಿಂದ 14 ವರ್ಷದೊಳಗಿನ ಮಕ್ಕಳ ಮತ್ತೊಂದು ಗುಂಪಾಗಿ ವಿಂಗಡಣೆ ಮಾಡುವಂತೆ ಕೇಂದ್ರ ಸರ್ಕಾರ ತಿಳಿಸಿದೆ.
ಅಲ್ಲದೇ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಸೂಚನೆ ನೀಡಿರುವ ಕೇಂದ್ರ 15 ಮಾರ್ಚ್ 2010ರೊಳಗೆ ಜನಿಸಿರುವ ಮಕ್ಕಳು ವ್ಯಾಕ್ಸಿನ್ ಪಡೆದುಕೊಳ್ಳಲು ಅರ್ಹರಲ್ಲ ಎಂದಿದೆ. ಲಸಿಕೆ ಪಡೆದುಕೊಳ್ಳಲು ಮಕ್ಕಳ ಪೋಷಕರು ಕೋವಿನ್ ಪೋರ್ಟಲ್ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಮಕ್ಕಳಿಗೆ ಕಾರ್ಬೆವ್ಯಾಕ್ಸ್ ಲಸಿಕೆ ಮಾತ್ರ ನೀಡಲು ಮಾರ್ಗಸೂಚಿಯಲ್ಲಿ ತಿಳಿಸಿದ್ದು, ಎರಡು ಡೋಸ್ಗಳ ಮಧ್ಯೆ 28 ದಿನಗಳ ಅಂತರ ಇರುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದಲ್ಲಿ 4.7 ಕೋಟಿ ಮಕ್ಕಳು 12-14 ವರ್ಷದೊಳಗಿನ ಮಕ್ಕಳು ಇದ್ದು, ಆರಂಭದಲ್ಲಿ ಕೋವಿಡ್ ಸೋಂಕಿನಿಂದ ಅಪಾಯದಲ್ಲಿರುವ ಮಕ್ಕಳಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.
ಹಾಗೇ ಇಂದಿನಿಂದಲೇ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಈಗಾಗಲೇ ಪ್ರಕಟಣೆ ಹೊರಡಿಸಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ.