ಲಸಿಕೆ ಕೊರತೆ – ಕೇಂದ್ರದಿಂದ ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿ
ನವದೆಹಲಿ: ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…
ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ಲಸಿಕೆ ಕೊರತೆಯೂ ಎದುರಾಗಿದೆ.. ದೇಶದ ಬಹುತೇಕ ಭಾಗಗಳಲ್ಲಿ ಕೊರೊನಾ ಲಸಿಕೆ ಅಭಾವ ಕಾಡುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳು ವ್ಯಾಕ್ಸಿನ್ ಕೊಳ್ಳಲು ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇಷ್ಟು ದಿನ ಖಾಸಗಿ ಆಸ್ಪತ್ರೆಗಳು ಉತ್ಪಾದನಾ ಕಂಪನಿಗಳಿಂದ ನೇರವಾಗಿ ಕೊರೊನಾ ಲಸಿಕೆ ಕೊಳ್ಳಬಹುದಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದ್ದು, ಖಾಸಗಿ ಆಸ್ಪತ್ರೆಗಳು ಸಹ ಕೋ-ವಿನ್ ಆಪ್‍ನಲ್ಲಿಯೇ ಆರ್ಡರ್ ಮಾಡಬೇಕು ಎಂದು ಹೊಸ ನಿಯಮದಲ್ಲಿ ತಿಳಿಸಿದೆ. ಕೊರೊನಾ ಲಸಿಕೆಯ ಸಂಗ್ರಹ ಹಾಗೂ ಲಾಭದ ಕುರಿತು ಪರಿಶೀಲಿಸುವ ದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಹೊಸ ಮಾರ್ಗಸೂಚಿಗಳ ಪ್ರಕಾರ ಖಾಸಗಿ ಆಸ್ಪತ್ರೆಗಳು ನೇರವಾಗಿ ಲಸಿಕೆ ಉತ್ಪಾದಕರಿಂದ ಕೊಳ್ಳುವಂತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕೋ-ವಿನ್ ಪೋರ್ಟಲ್‍ನಲ್ಲಿ ವ್ಯಾಕ್ಸಿನ್ ಆರ್ಡರ್ ಮಾಡಬೇಕು. ಅಲ್ಲದೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮೂಲಕ ಪೇಮೆಂಟ್ ಮಾಡಬೇಕು. ಜುಲೈ 1 ರಿಂದ ಅಂದ್ರೆ ಇಂದಿನಿಂದ ವ್ಯಾಕ್ಸಿನ್ ಖರೀದಿಯ ಹೊಸ ನಿಯಮಗಳು ಜಾರಿಗೆ ಬರಲಿವೆ.
ಉತ್ಪಾದಕರ ಕಡೆಯಿಂದ ನೇರವಾಗಿ ಖರೀದಿಸಿದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಕಡಿಮೆ ಪ್ರಮಾಣದಲ್ಲಿ ಬಳಸುತ್ತಿವೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡುತ್ತಿಲ್ಲ, ಸ್ಟಾಕ್ ಉಳಿಯುತ್ತಿದೆ ಎಂಬ ಕುರಿತು ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.
ಹೊಸ ನಿಯಮದ ಪ್ರಕಾರ, ಲಸಿಕೆ ಖರೀದಿಸಿದ ಬಳಿಕ ಸಂಗ್ರಹಣೆ ಹಾಗೂ ಲಸಿಕೆ ಹಾಕಿರುವುದು ಎಲ್ಲದರ ಕುರಿತು ಲೆಕ್ಕ ನೀಡಬೇಕಾಗುತ್ತದೆ. ನಿರ್ದಿಷ್ಟ ತಿಂಗಳಲ್ಲಿ ಅಥವಾ ವಾರದಲ್ಲಿ ಎಷ್ಟು ಲಸಿಕೆ ಖರ್ಚಾಗಿದೆ ಎಂಬುದನ್ನು ಖಾಸಗಿ ಆಸ್ಪತ್ರೆಗಳು ತಿಳಿಸಬೇಕಾಗುತ್ತದೆ. ಇದರಿಂದಾಗಿ ಹೆಚ್ಚು ದಿನಗಳ ಕಾಲ ಸ್ಟಾಕ್ ಇಟ್ಟುಕೊಳ್ಳುವುದು ತಪ್ಪುತ್ತದೆ. ಇದರಿಂದ ಸರ್ಕಾರಕ್ಕೆ ಹೆಚ್ಚು ಲಸಿಕೆ ಸಿಗುತ್ತದೆ.