ದೇಶದಲ್ಲಿ ಒಂದೇ ದಿನ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ..!
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,713 ಹೊಸ ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 08 ಲಕ್ಷದ 14 ಸಾವಿರದ 304ಕ್ಕೆ ಏರಿಕೆಯಾಗಿದೆ. ಒಂದೇ ದಿನ ಕೊರೊನಾದಿಂದ 95 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1ಲಕ್ಷದ 54 ಸಾವಿರದ 918ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದಾಗಿ ಪರೀಕ್ಷೆ ಬರೆಯದ UPSC ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್!
ಒಟ್ಟು ಸೋಂಕಿತರ ಸಂಖ್ಯೆ 1,08,14,304 ತಲುಪಿದ್ದು, ಒಂದೇ ದಿನ 14,488 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 1,05,10,796ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಇನ್ನೂವರೆಗೂ 1,48,590 ಸಕ್ರಿಯ ಪ್ರಕರಣಗಳು ಇವೆ. ಇನ್ನು ಭಾರತದಲ್ಲಿ ಒಂದೇ ದಿನ 7,40,794 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 20,06,72,589 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಅಲ್ದೇ ಒಟ್ಟಾರೆ, 54,16,849 ಮಂದಿಗೆ ಲಸಿಕೆಯನ್ನು ನೀಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel