ರಾಜ್ಯದಲ್ಲಿ ಕೊರೊನಾ 3ನೇ ಅಲೆಯಲ್ಲಿ ಹೆಚ್ಚು ಪರಿಣಾಮ ಬೀರುವುದು ಮಕ್ಕಳ ಮೇಲೆ..!
ಇನ್ನೇನು ಕೊರೊನಾ 2ನೇ ಅಲೆ ತಗ್ಗಿತು ಆತಂಕ ಪಡೋ ಅಗತ್ಯ ಏನೂ ಇಲ್ಲ ಅಂತ ಜನರು ನಿಟ್ಟುಸಿರು ಬಿಡುತ್ತಿರುವ ಹೊತ್ತಲ್ಲೇ ಮತ್ತೆ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ.. ದೇಶದಲ್ಲಿ ದಿನನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ.. ಈ ನಡುವೆ 3ನೇ ಅಲೆ ಎಚ್ಚರಿಕೆಯ ನಡುವೆಯೂ ರಾಜ್ಯ ಸರ್ಕಾರ ಧೈರ್ಯ ಮಾಡಿ ಹೈ ಸ್ಕೂಲ್ ನಂತರದ ಶಾಲೆ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿದೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರಿಗೆ ಕೊರೊನಾ..!
3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಆಗ್ತಾರೆ ಅನ್ನೋ ಎಚ್ಚರಿಕೆಯೂ ಬಹಳ ಹಿಂದೆಯೇ ಸಿಕ್ಕಿತ್ತು. ಇದೀಗ 3ನೇ ಅಲೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಾದ ಮಕ್ಕಳ ಸಂಖ್ಯೆಗಿಂತಲೂ ಈ ಬಾರಿ ಏಳು ಪಟ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಬೆಂಗಳೂರಿನ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ವಿವಿಧ ಮಾದರಿ ವಿಧಾನಗಳ ಆಧಾರದ ಮೇಲೆ ತಜ್ಞರು ಈ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಭಾರತೀಯ ಸಾರ್ವನಿಕ ಆರೋಗ್ಯ ಗಳ ತಜ್ಞರು ಈ ಅಧ್ಯಯನವನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಕರ್ನಾಟಕ ಕೇಂದ್ರೀಕೃತವಾಗಿ ಈ ಅಧ್ಯಯನ ಕೈಗೊಳ್ಳಲಾಗಿದೆ.
ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮೋದಿ ನಂ.1 , ಜೋ ಬೈಡೆನ್ ಗೆ 5ನೇ ಸ್ಥಾನ..!
ಆದ್ರೆ ಕೋವಿಡ್–19 ಸೋಂಕಿಗೆ ಒಳಗಾದರೂ ಬಹುತೇಕ ಮಕ್ಕಳು ಆಸ್ಪತ್ರೆಗೆ ದಾಖಲಾಗುವ ಅಗತ್ಯ ಇರುವುದಿಲ್ಲ. ಸರಾಸರಿ ಆಧಾರದ ಮೇಲೆ ಏಳು ಪಟ್ಟು ಹೆಚ್ಚಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಇದು ಮೂರರಿಂದ ಹತ್ತು ಪಟ್ಟು ಸಹ ಹೆಚ್ಚಾಗಬಹುದು ಎಂದು ಸಾಂಕ್ರಾಮಿಕ ಕಾಯಿಲೆಗಳ ತಜ್ಞ ಡಾ.ಗಿರಿಧರ ಬಾಬು ವಿವರಿಸಿದ್ದಾರೆ. ಇನ್ನೂ ಲಸಿಕಾ ಅಭಿಯಾನವನ್ನು ಮತ್ತಷ್ಟು ತ್ವರಿತಗೊಳಿಸಬೇಕು ಮತ್ತು ಕೋವಿಡ್–19 ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಮಾತ್ರ ಮೂರನೇ ಅಲೆಯನ್ನು ತಡೆಯಬಹುದು ಎಂದು ಕೂಡ ತಿಳಿಸಿದ್ದಾರೆ.