ಶುರುವಾಯ್ತಾ ಕೋವಿಡ್ 3ನೇ ಅಲೆ… ಬೆಂಗಳೂರಲ್ಲೇ ವಾರದ ಅಂತರದಲ್ಲಿ 499 ಮಕ್ಕಳಲ್ಲಿ ಸೋಂಕು…! ಆರೋಗ್ಯ ಇಲಾಖೆ ಎಚ್ಚರಿಕೆ
ಇನ್ನೇನು ಕೊರೊನಾ 2ನೇ ಅಲೆ ತಗ್ಗಿತು ಆತಂಕ ಪಡೋ ಅಗತ್ಯ ಏನೂ ಇಲ್ಲ ಅಂತ ಜನರು ನಿಟ್ಟುಸಿರು ಬಿಡುತ್ತಿರುವ ಹೊತ್ತಲ್ಲೇ ಮತ್ತೆ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ.. ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಅದು ಅಲ್ಲದೇ 3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ಕೆಲ ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಈಗಾಗಲೇ ಮಕ್ಕಳನ್ನ ಕೊರೊನಾ ಕಾಡಲು ಶುರು ಮಾಡಾಗಿದೆ ಎನ್ನುವುದಕ್ಕೆ ಬೆಂಗಳೂರಲ್ಲೇ ಪುರಾವೆ ಸಿಕ್ಕಿದೆ. ಹೌದು ರಾಜ್ಯ ರಾಜಧಾನಿಯಲ್ಲಿ ಆಗಸ್ಟ್ ಮೊದಲ 10 ದಿನಗಳಲ್ಲಿ 499 ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಪೋಷಕರ ಆತಂಕ ಹೆಚ್ಚಾಗಿದೆ. ಅದು ಅಲ್ದೇ ಈವರೆಗೂ ಮಕ್ಕಳಿಗೆ ಲಸಿಕೆ ಬಾರದೇ ಇರೋದು ಆತಂಕವನ್ನ ಇಮ್ಮಡಿಗೊಳಿಸಿದೆ.
ಜಾಗತಿಕ ಶ್ರೇಯಾಂಕದಲ್ಲಿ 2 ನೇ ಸ್ಥಾನಕ್ಕೇರಿದ ಭಾರತದ ‘ಚಿನ್ನದ ಹುಡುಗ’ ..!
9 ವರ್ಷದೊಳಗಿನ ಸುಮಾರು 88 ಮಕ್ಕಳು ಮತ್ತು 10 ರಿಂದ 19 ವರ್ಷದೊಳಗಿನ 305 ಮಂದಿ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. 499 ಪ್ರಕರಣಗಳ ಪೈಕಿ, ಕಳೆದ 5 ದಿನಗಳಲ್ಲಿ 263 ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ 88 ಪ್ರಕರಣಗಳು 9 ವರ್ಷದೊಳಗಿನವರಾಗಿದ್ದರೆ, 175 ಪ್ರಕರಣ 10 ರಿಂದ 19 ವರ್ಷ ವಯಸ್ಸಿನವರಾಗಿದ್ದಾರೆ. ಆರೋಗ್ಯ ಇಲಾಖೆಯು ಈ ಬೆಳವಣಿಗೆ ಬಗ್ಗೆ ಕಳವಳ ವ್ಯಕ್ತಪಡಿಸಿದೆ.. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಈಗಾಗಲೇ ಕಠಿಣ ಕ್ರಮಗಳನ್ನು ಆರಂಭಿಸಿದೆ. ಮುಂಬರುವ ಕೆಲವು ವಾರಗಳಲ್ಲಿ ಈ ಸಂಖ್ಯೆ ಮೂರು ಪಟ್ಟು ಹೆಚ್ಚಾಗಬಹುದು ಎಂದು ಆರೋಗ್ಯ ಇಲಾಖೆಯ ಮೂಲಗಳು ಎಚ್ಚರಿಸಿರೋದು ಪೋಷಕರಿಗೆ ಆತಂಕ ಹೆಚ್ಚಾಗಿದೆ..
ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 41,195 ಮಂದಿಗೆ ಸೋಂಕು