ಚಿಕನ್ ಫಾಕ್ಸ್ ನಷ್ಟೇ ವೇಗವಾಗಿ ಹರಡುತ್ತದೆ ಡೆಲ್ಟಾ ರೂಪಾಂತರ : ಅಮೆರಿಕ
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಮತ್ತೊಂದು ಆಘಾತಕಾರಿ ವಿಚಾರವನ್ನ ಅಮೆರಿಕಾದ ಅಧ್ಯಯನವೊಂದು ಬಹಿರಂಗಪಡಿಸಿದೆ. ಕೊರೊನಾ ವೈರಸ್ ನ ಡೆಲ್ಟಾ ರೂಪಾಂತರವು ಚಿಕನ್ ಫಾಕ್ಸ್ ನಷ್ಟೇ ವೇಗವಾಗಿ ಹರಡುತ್ತದೆ ಎಂದು ಅಮೆರಿಕದ ಕಾಯಿಲೆ ನಿಯಂತ್ರಣ ಮತ್ತು ತಡೆ ಕೇಂದ್ರದ ಆಂತರಿಕ ದಾಖಲೆಗಳಲ್ಲಿ ಉಲ್ಲೇಖವಾಗಿದೆ. ಕೋವಿಡ್ ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಹೊರಡಿಸುವ ಮತ್ತು ಕಠಿಣ ನಿರ್ಬಂಧಗಳನ್ನು ವಿಧಿಸುವ ಎಲ್ಲ ಸಾಧ್ಯತೆಗಳಿವೆ ಎಂದು ಅಮೆರಿಕ ಅಧ್ಯಕ್ಷ ಬೋ ಬೈಡೆನ್ ಹೇಳಿಕೆ ನೀಡಿದ ಬೆನ್ನಲ್ಲೇ ಈ ವರದಿ ಪ್ರಕಟವಾಗಿದೆ
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ದೇಶದಲ್ಲಿ 70 ‘ಡೆಲ್ಟಾ ಪ್ಲಸ್’ ರೂಪಾಂತರ ತಳಿ ಪತ್ತೆ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








