ಕೆನಡಾದಲ್ಲಿ ಕೋವಿಡ್ ನಿಯಮ ಸಡಿಲಗೊಳಿಸಿದ್ದೇ ಆದ್ರೆ 4ನೇ ಅಲೆ ಖಚಿತ..!
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ..
ಈ ನಡುವೆ ಕೆನಡಾ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಲಸಿಕೆ ಪಡೆಯುವುದಕ್ಕಿಂತ ಮುನ್ನವೇ ನಿರ್ಬಂಧಗಳನ್ನು ಸಡಿಲಗೊಳಿಸಿದರೆ, ಡೆಲ್ಟಾ ರೂಪಾಂತರ ತಳಿಯಿಂದಾಗಿ ಬೇಸಿಗೆ ಅಂತ್ಯದ ವೇಳೆಗೆ ಕೋವಿಡ್ ನ 4ನೇ ಅಲೆಯನ್ನು ಎದುರಿಸಬೇಕಾಗುತ್ತದೆ ಎಂದು ಕೆನಡಾದ ಮುಖ್ಯ ಸಾರ್ವಜನಿಕ ಆರೋಗ್ಯ ಅಧಿಕಾರಿ ಡಾ. ಥೆರೆಸಾ ಟಾಮ್ ಎಚ್ಚರಿಕೆ ನೀಡಿದ್ದಾರೆ.
ಹೌದು ಲಸಿಕೆಯಿಂದಾಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಸಾವಿನ ಪ್ರಮಾಣದಲ್ಲೂ ಇಳಿಕೆ ಕಂಡುಬಂದಿದೆ. ಆದರೆ, ಕೋವಿಡ್ ಪ್ರಸರಣವನ್ನು ತಡೆಯಲು ಲಸಿಕಾ ಅಭಿಯಾನವನ್ನು ಇನ್ನಷ್ಟು ಹೆಚ್ಚಿಸಬೇಕು. ಯುವಕರು ಲಸಿಕೆ ಪಡೆಯಬೇಕು. ಇದುವರೆಗೆ, ಯುವಕರೇ ಅತಿ ಕಡಿಮೆ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಕೆನಡಾದಲ್ಲಿ ಸುಮಾರು 63 ಲಕ್ಷ ಜನರು ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿಲ್ಲ ಮತ್ತು 50 ಲಕ್ಷ ಮಂದಿ ಎರಡನೇ ಡೋಸ್ಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆನಡಾದಲ್ಲಿ ಶನಿವಾರದ ವೇಳೆಗೆ 70 ವರ್ಷ ಮೇಲ್ಪಟ ಶೇಕಡ 89ರಷ್ಟು ವಯಸ್ಕರು ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದಾರೆ. ಆದರೆ, 18 ರಿಂದ 29 ವಯಸ್ಸಿನೊಳಗಿನ ಶೇಕಡ 46ರಷ್ಟು ಮಂದಿ ಮಾತ್ರ ಸಂಪೂರ್ಣ ಲಸಿಕೆಯನ್ನು ಪಡೆದಿದ್ದಾರೆ. 30–39 ವಯೋಮಿತಿಯ ಶೇಕಡ 54ರಷ್ಟು ಜನರು ಲಸಿಕೆಯ ಎರಡೂ ಡೋಸ್ ಳನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








