ಕೋವ್ಯಾಕ್ಸಿನ್ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿರುವುದಾಗಿ ವರದಿಯಾಗಿದೆ. ಭಾರತದ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿ ಪಡಿಸಿರುವ ಕೋವಿಡ್–19 ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ WHO ಅನುಮತಿಸಿದೆ. ತುರ್ತು ಬಳಕೆ ಲಸಿಕೆಗಳ ಪಟ್ಟಿಯಲ್ಲಿ ಕೋವ್ಯಾಕ್ಸಿನ್ ಸೇರ್ಪಡೆಗೆ WHOದ ತಾಂತ್ರಿಕ ಸಲಹಾ ಸಮಿತಿ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಈ ಮೂಲಕ ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್ ಲಸಿಕೆಗೆ ಜಾಗತಿಕ ಮಾನ್ಯತೆ ದೊರೆತಂತಾಗಿದೆ.
ತುರ್ತು ಬಳಕೆಯ ಕೋವಿಡ್ ಲಸಿಕೆಗಳ ಪಟ್ಟಿಗೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಅನ್ನೂ ಸೇರ್ಪಡೆಗೊಳಿಸಲಾಗಿದೆ. ಕೋವಿಡ್–19 ಪ್ರಸರಣ ತಡೆಯುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾಗಿರುವ ಅನುಮೋದಿತ ಲಸಿಕೆಗಳ ಪಟ್ಟಿ ಬೆಳೆಯುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್ ಮಾಡಿದೆ.