“ಕೋವಿಡ್ ಜ್ವರ, ಶೀಥ, ಕೆಮ್ಮು ನೆಗಡಿಯಂತೆ ಮಕ್ಕಳಲ್ಲಿ ಸಾಮಾನ್ಯವಾಗಿ ಕಾಡುವ ಅನಾರೋಗ್ಯ ಸಮಸ್ಯೆ ಆಗಿ ಉಳಿಯಲಿದೆ”
ಇನ್ನೇನು ಕೊರೊನಾ 2ನೇ ಅಲೆ ತಗ್ಗಿತು ಆತಂಕ ಪಡೋ ಅಗತ್ಯ ಏನೂ ಇಲ್ಲ ಅಂತ ಜನರು ನಿಟ್ಟುಸಿರು ಬಿಡುತ್ತಿರುವ ಹೊತ್ತಲ್ಲೇ ಮತ್ತೆ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ.. ದೇಶದಲ್ಲಿ ದಿನನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ.. 3ನೇ ಅಲೆ ಶುರುವಾದ ಸಂಕೇತವೂ ಸಿಕ್ಕಿದೆ.. 3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಅನ್ನೋ ತಜ್ಞರ ಹೇಳಿಕೆ ನಿಜ ಎನಿಸುವಂತೆ ಹೆಚ್ಚು ಹೆಚ್ಚು ಮಕ್ಕಳು ಸೋಂಕಿಗೆ ಒಳಗಾಗ್ತಿದ್ದಾರೆ..
ಈ ನಡುವೆ ಕೋವಿಡ್-19 ಸೋಂಕು ಜ್ವರ, ಶೀಥ, ಕೆಮ್ಮು ನೆಗಡಿಯಂತೆ ಮಕ್ಕಳಲ್ಲಿ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಕಾಡಲಿದೆ ಎಂದು ಸಂಶೋಧಕರು ಆಘಾತಕಾರಿ ಮಾಹಿತಿ ಹೊರ ಹಾಕಿದ್ದಾರೆ. ಹೌದು ಅಮೆರಿಕಾ ಮತ್ತು ನೈಜೀರಿಯಾದ ಸಂಶೋಧಕರು ಜಂಟಿಯಾಗಿ ನಡೆಸಿದ ಸಂಶೋಧನೆಯ ಮಾಹಿತಿ ಇದೀಗ ಹೊರಬಿದ್ದಿದ್ದು, ಮುಂದಿನ ಕೆಲವು ವರ್ಷಗಳಲ್ಲಿ ಮಕ್ಕಳಲ್ಲಿ ಕೋವಿಡ್ ಸೋಂಕು ಸಾಮಾನ್ಯವಾಗಿ ಕಂಡುಬರುವ ಸೋಂಕಿನ ರೋಗ ಲಕ್ಷಣ ಆಗಲಿದೆ. ಪ್ರಸ್ತುತ ಮಕ್ಕಳಲ್ಲಿ ಹೇಗೆ ಶೀತ, ನೆಗಡಿ, ಕೆಮ್ಮು ಸೇರಿದಂತೆ ಇನ್ನಿತರೆ ಸೋಂಕಿನ ಲಕ್ಷಣಗಳು ಮಕ್ಕಳನ್ನು ಬಾಧಿಸುತ್ತಿರುತವೆಯೋ ಅಂತೆಯೇ ಕೋವಿಡ್-19 ಸೋಂಕು ಕೂಡ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡುಬರಲಿದೆ ಎಂದು ಹೇಳಿದ್ದಾರೆ.
ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಒಟ್ಟರ್ ಬೋಜರ್ ಸ್ಟಾಂಡ್ ಮತ್ತು ಅವರ ಸಂಶೋಧಕ ತಂಡ ನಡೆಸಿದ ಅಧ್ಯಯನದಲ್ಲಿ ವಿಷಯವನ್ನು ತಿಳಿಸಿದ್ದು, ಮುಂದಿನ ಕೆಲವು ವರ್ಷಗಳಲ್ಲಿ ಮಕ್ಕಳು ಮತ್ತು ಹದಿ ಹರೆಯದ ವಯೋಮಾನದ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರಲಿದೆ ಎಂದು ಹೇಳಿದೆ.
ಸಂಶೋಧಕ ತಂಡ ತಾವು ನಡೆಸಿದ ಅಧ್ಯಯನದ ಮಾಹಿತಿಯನ್ನು ವಿಜ್ಞಾನಕ್ಕೆ ಸಂಬಂಧಿಸಿದ ನಿಯತಕಾಲಿಕದಲ್ಲಿ ಈ ವಿಷಯವನ್ನು ಬಹಿರಂಗ ಪಡಿಸಿದ್ದು, ಕೊರೊನಾ ಸೋಂಕು ಮುಂದಿನ ದಿನಗಳಲ್ಲಿ ಕಡಿಮೆಯಾದರೂ ಮಕ್ಕಳು ಮತ್ತು ಹದಿಹರೆಯದ ಜನರಲ್ಲಿ ಸಾಮಾನ್ಯವಾಗಿ ಕಂಡುಬರುವ ರೋಗಲಕ್ಷಣಗಳ ಆಗಲಿದೆ. ಅದರಲ್ಲೂ 7 ರಿಂದ 12 ತಿಂಗಳ ವಯೋಮಾನದ ಮಕ್ಕಳು ಮತ್ತು 70 ವರ್ಷ ದಾಟಿದವರ ವಿಚಾರದಲ್ಲಿ ಈ ರೀತಿಯ ಸಮಸ್ಯೆಗಳು ಕಂಡು ಬರಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.