ಕೋವಿಡ್ : ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 2000 ರೂ. ಸಹಾಯಧನ
ಗುಜರಾತ್ : ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ…
ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ಕೊರೊನಾ ಮಹಾಮಾರಿಯಿಂದಾಗಿ ಕನಿಷ್ಠ ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2000 ರೂಗಳ ಸಹಾಯಧನವನ್ನು ನೀಡುವುದಾಗಿ ಗುಜರಾತ್ ಸರ್ಕಾರ ಘೋಷಿಸಿದೆ. ಅಂದ್ಹಾಗೆ ಗುಜರಾತ್‌ನಲ್ಲಿ ಇದುವರೆಗೆ 726 ಮಕ್ಕಳು ತಮ್ಮ ತಂದೆ ಮತ್ತು ತಾಯಿಯನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದಾರೆ. ಈಗಾಗಲೇ ಕೋವಿಡ್ ನಿಂದಾಗಿ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗೆ ಪ್ರತಿ ತಿಂಗಳು 4000 ರೂಗಳ ಸಹಾಯಧನವನ್ನು 18 ವರ್ಷದವರೆಗೆ ಒದಗಿಸುವ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗೆ ಪೂರಕವಾಗಿ ಈ ಯೋಜನೆ ಘೋಷಿಸಲಾಗಿದೆ.
2000 ರೂಪಾಯಿಗಳ ಸಹಾಯಧನ ಕೂಡ ಅರ್ಹ ಮಕ್ಕಳಿಗೆ 18 ವರ್ಷದವರೆಗೆ ನೀಡಲಾಗುತ್ತದೆ. ಈ ವಿಷಯವಾಗಿ ಗುಜರಾತ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುನೈನಾ ತೋಮರ್ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ಪತ್ರವನ್ನು ಹೊರಡಿಸಿದ್ದು, ಸಂತ್ರಸ್ತ ಮಕ್ಕಳನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಸೂಚಿಸಿದ್ದಾರೆ. ಈ ಯೋಜನೆಯ ಪ್ರಕಾರ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಆಗಲಿದೆ. ಆಗಸ್ಟ್ 2 ರಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಇಳಿಕೆ , ಚೇತರಿಕೆ ಪ್ರಮಾಣ ಹೆಚ್ಚಳ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








