“ಒಂದೂವರೆ ವರ್ಷ… ಕರ್ನಾಟಕದಲ್ಲಿ 70 % ಜನರಿಗೆ ಕೊರೊನಾ ಸಂಪರ್ಕ”
ದೇಶಾದ್ಯಂತ ಹಾಗೂ ರಾಜ್ಯವನ್ನೂ ಸಹ ಇನ್ನಿಲ್ಲದಂತೆ ಕಾಡಿರುವ ಹೆಮ್ಮಾರಿ ಕೊರೊನಾ 2ನೇ ಅಲೆ ಕಡಿಮೆಯಾಯ್ತು ಅನ್ನೋವಾಗಲೇ , ದೈನಂದಿನ ಕೇಸ್ ಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಕರ್ನಾಟಕದ ಶೇ 70ರಷ್ಟು ಜನರು ಒಂದೂವರೆ ವರ್ಷದಲ್ಲಿ ಕೊರೊನಾ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದಾರೆ. ದೇಶದ ಸರಾಸರಿ ಶೇ 67ರಷ್ಟು ಜನರು ಕೊರೊನಾವೈರಾಣು ಸಂಪರ್ಕಕ್ಕೆ ಬಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ 4ನೇ ಸೆರೊ ಸಮೀಕ್ಷೆಯ ವರದಿ ಹೇಳಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲೂ ಸೆರೊ ಸಮೀಕ್ಷೆ ನಡೆಸಿ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.
ಇನ್ನೂ ರಾಜ್ಯವಾರು ಸೆರೊ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಎಲ್ಲಾ ರಾಜ್ಯಗಳು ತಮ್ಮ ಜಿಲ್ಲೆಗಳ ಸೆರೊ ಸಮೀಕ್ಷೆ ನಡೆಸಬೇಕು. ಆ ಮೂಲಕ ಲಭ್ಯವಾದ ದತ್ತಾಂಶದ ಪ್ರಕಾರ ಕೋವಿಡ್ ಹರಡುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಇನ್ನೂ ದೇಶದ ಶೇ 67.6ರಷ್ಟು ಜನರು ಕೊರೊನಾವೈರಾಣುವಿನ ಸಂಪರ್ಕಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಇದೇ ಜೂನ್-ಜುಲೈನಲ್ಲಿ ನಡೆದ 4ನೇ ಸೆರೊ ಸಮೀಕ್ಷೆಯ ವರದಿ ಹೇಳಿದೆ. ದೇಶದ 70 ಜಿಲ್ಲೆಗಳಲ್ಲಿ ಮಾತ್ರವೇ ಈ ಸಮೀಕ್ಷೆ ನಡೆಸಲಾಗಿತ್ತು. ಹೀಗಾಗಿ ಎಲ್ಲಾ ಜಿಲ್ಲೆಗಳ ಪೂರ್ಣ ಮತ್ತು ಕರಾರುವಕ್ಕಾದ ಚಿತ್ರಣ ಲಭ್ಯವಿಲ್ಲ.
ರಾಬರ್ಟ್ ನಂತರ ಕನ್ನಡದ ಮತ್ತೊಂದು ಚಿತ್ರದ ಹಾಡಿಗೆ ಧ್ವನಿಯಾದ ಮಂಗ್ಲಿ..!
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
‘ಸೌತ್ ಇಂಡಿಯಾ’ದಲ್ಲಿ ಇನ್ಮುಂದೆ ‘ಡಾಲಿ’ ಧಮಾಕ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.