Covid Report : 24 ಗಂಟೆಗಳಲ್ಲಿ 1,150 ಪ್ರಕರಣಗಳು ಪತ್ತೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,150 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ… ನಿನ್ನೆ ದೇಶದಲ್ಲಿ ನಾಲ್ವರು ಮಹಾಮಾರಿಗೆ ಉಸಿರು ಚೆಲ್ಲಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 5,21,751ಕ್ಕೆ ಏರಿಕೆಯಾಗಿದೆ
ಸದ್ಯ ದೇಶದಲ್ಲಿ 11,558 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಶೇ 0.03 ರಷ್ಟಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 0.31 ರಷ್ಟಿದೆ.
24 ಗಂಟೆಗಳ ಅವಧಿಯಲ್ಲಿ 954 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,25,08,788 ಜನರು ಗುಣಮುಖರಾಗಿದ್ದಾರೆ.
ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 3,65,118 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 83.18 ಕೋಟಿಗೂ ಅಧಿಕ ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ.








