ಇಂದು ದೇಶದಲ್ಲಿ 15,823 ಹೊಸ ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಏರಿಕೆ
ಕೋವಿಡ್ ದೈನಂದಿನ ಕೇಸ್ ಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 18,823 ಮಂದಿಗೆ ಸೋಂಕು ತಗುಲಿದ್ದು, ಅನೇಕ ತಿಂಗಳುಗಳ ಬಳಿಕ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಸೋಂಕಿತರ ಸಂಖ್ಯೆ ದಾಖಲಾಗಿರೋದು ಸಮಾಧಾನಕರ ಸಂಗತಿಯಾಗಿದೆ. ಆದ್ರೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಒಂದೇ ದಿನ 226 ಮಂದಿ ಕೊನೆಯುಸಿರೆಳೆದಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,40,01,743 ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸಾವಿನ ಸಂಖ್ಯೆ 4,51,189 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 2,07,653 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇದೇ ಅವಧಿಯಲ್ಲಿ 22,844 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಈವರೆಗೆ 3,33,42,901 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.