ರಾಜ್ಯದಲ್ಲಿ 1857 ಹೊಸ ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1857 ಕೋವಿಡ್ ಪಾಸಿಟಿವ್ ಪ್ರಕಣಗಳು ಪತ್ತೆಯಾಗಿದ್ದು, 30 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. 1950 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 28,65,067ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22,728 ಇದೆ.
ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 41,195 ಮಂದಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ.ಇದೇ ಅವಧಿಯಲ್ಲಿ 490 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 32,077,706 ಕ್ಕೆ ಏರಿಕೆಯಾಗಿದೆ. ಜೊತೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,29,669 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು 387,987 ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.








