ರಾಜ್ಯದಲ್ಲಿ ಇಂದು 32,218 ಹೊಸ ಕೋವಿಡ್ ಕೇಸ್ ಗಳು ಪತ್ತೆ – ಗುಣಮುಖರಾದವರ ಸಂಖ್ಯೆಯೂ ಏರಿಕೆ..!
ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 32,218 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 2-3 ದಿನಗಳಿಂದ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ 52,581 ಮಂದಿ ಗುಣಮುಖರಾಗಿದ್ದಾರೆ ಎಂದು ಮಾಹಿತಿ ಬಹಿರಂಗಪಡಿಸಿದೆ. ಮತ್ತೊಂದು ಸಮಾಧಾನಕರವಾದ ಸಂಗತಿಯೆಂದ್ರೆ ಇಂದು ಹೊಸ ಕೇಸ್ ಗಳ ಪ್ರಮಾಣವು ಕಡಿಮೆಯಾಗಿದೆ. ಅಲ್ಲದೆ ಸಾವಿನ ಪ್ರಮಾಣದಲ್ಲೂ ಕುಸಿತ ಕಂಡಿದ್ದು ಇಂದು ಸೋಂಕಿನಿಂದ 353 ಮಂದಿ ಸಾವನ್ನಪ್ಪಿದ್ದಾರೆ.
ಇನ್ನೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಾವಳಿ ಮಿತಿ ಮೀರಿರುವ ಹಿನ್ನೆಲೆ ರಾಜ್ಯ ಸರ್ಕಾರ ಮೇ 25 ರವರೆಗೂ ಲಾಕ್ ಡೌನ್ ಜಾರಿಗೊಳಿಸಿತ್ತು. ಇದನ್ನ ಈಗ ಜೂನ್ 6 ರವೆಗೂ ವಿಸ್ತರಿಸಲಾಗಿದೆ… ಹೌದು ಕೋವಿಡ್ ತಡೆಗೆ ಲಾಕ್ ಡೌನ್ ಮುಂದುವರೆಸುವುದು ಅನಿವಾರ್ಯವೆಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ಸೇರಿದಂತೆ ಹಲವರು ಅಭಿಪ್ರಾಯ ಹೊರಹಾಕಿದ ಬೆನ್ನಲ್ಲೇ ಲಾಕ್ ಡೌನ್ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ.
ಅಂದ್ರೆ ಮೇ.24ರಿಂದ ಮತ್ತೆ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಿರಲಿದೆ.. ಜೂನ್ 7 ರ ಬೆಳಿಗ್ಗೆ 6 ಗಂಟೆಯ ವರೆಗೂ ಲಾಕ್ ಡೌನ್ ಆಗಿರಲಿದೆ. ಅಲಲ್ಲದೇ ಮತ್ತಷ್ಟು ಕಠಿಣ ಕ್ರಮಗಳನ್ನ ತರಲಾಗಿದೆ.. ಜನರು 10 ಗಂಟೆಯಾದ್ಮೇಲೂ ಸುಖಾಸುಮ್ಮನೆ ಓಡಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.. ಜೊತೆಗೆ 9.45 ರಷ್ಟರಲ್ಲೇ ಜನರು ಮನೆ ಸೇರಬೇಕು.. ಅಗತ್ಯವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂವರೆಗೂ ಅವಕಾಶ ನೀಡಲಾಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.