ಕಳೆದ 24 ಗಂಟೆಗಳಲ್ಲಿ 9,216 ಹೊಸ ಪ್ರಕರಣಗಳು ಪತ್ತೆ..!
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 9,765 covid19 ಪ್ರಕರಣಗಳು ಪತ್ತೆಯಾಗಿವೆ.
391ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,46,15,757 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,70,115 ಕ್ಕೆ ತಲುಪಿದೆ.
ರಾಷ್ಟ್ರೀಯ ಚೇತರಿಕೆ ದರವು ಪ್ರಸ್ತುತ 98.36 ಪ್ರತಿಶತದಷ್ಟಿದೆ. ಇದು ಮಾರ್ಚ್ 2020 ರಿಂದ ಅತಿ ಹೆಚ್ಚು.
ಕಳೆದ 24 ಗಂಟೆಗಳಲ್ಲಿ ಕೋವಿಡ್ ನಿಂದ 8,612 ಗುಣಮುಖರಾಗಿದ್ದಾರೆ.
ಈವರೆಗೆ 3,40,45,666 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 99,976 ಕ್ಕೆ ಇಳಿಕೆಯಾಗಿದೆ.
ದೇಶದಾದ್ಯಂತ ಈವರೆಗೆ 125.8 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ.








