Covid Update – 1 ಲಕ್ಷದ ಹತ್ತಿರ ಬಂದು ನಿಂತ ಸಕ್ರಿಯ ಪ್ರಕರಣಗಳ ಸಂಖ್ಯೆ…
ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆಯುತ್ತಿದೆ. ಕಳೆದ ಕೆಲವು ದಿನಗಳಿಂದ ದೈನಂದಿನ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಿಸಿದ ಇಂದಿನ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೊರೊನಾ ಸೋಂಕಿತರು ಮತ್ತೆ ಪತ್ತೆಯಾಗಿದ್ದಾರೆ. ಈ ಸಂಖ್ಯೆ ಸೋಮವಾರಕ್ಕಿಂತ ಕಡಿಮೆಯಾದರೂ, ಅಂಕಿಅಂಶಗಳು ಮಾತ್ರ ಭಯಾನಕವಾಗಿವೆ. ಸೋಮವಾರ ದೇಶಾದ್ಯಂತ 17,073 ಹೊಸ ಪ್ರಕರಣಗಳು ವರದಿಯಾಗಿದ್ದವು.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸಕ್ರಿಯ ಕರೋನಾ ರೋಗಿಗಳ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಈಗ ದೇಶದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ ಒಂದು ಲಕ್ಷದ ಸಮೀಪಕ್ಕೆ ತಲುಪಿದೆ. ಇಂದು ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ, 96,700 ಕರೋನಾ ರೋಗಿಗಳು ಚಿಕಿತ್ಸೆಯಲ್ಲಿದ್ದಾರೆ.
ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆಯೂ ಏರುಪೇರಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾ 27 ಜನರನ್ನು ಬಲಿ ತೆಗೆದುಕೊಂಡಿದೆ. ಒಂದು ದಿನದ ಹಿಂದೆ ಅಂದರೆ ನಿನ್ನೆ 21 ಜನರು ಸಾವನ್ನಪ್ಪಿದ್ದರು. ಇದೀಗ ದೇಶದಲ್ಲಿ ಕರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 5,25,047 ಕ್ಕೆ ಏರಿಕೆಯಾಗಿದೆ.








