ಭಾರತದಲ್ಲಿ ಕೋವಿಡ್ 2ನೇ ಅಲೆ – ಸದ್ಯದ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶ್ವ ಸಂಸ್ಥೆ
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಭಾರತದ ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ದೇಶದಲ್ಲಿ ಕೊರೊನಾ ಸ್ಥಿತಿ ಭೀಕರವಾಗುತ್ತಿದೆ. ಅಲ್ಲಿನ ಕೆಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಇದನ್ನು ಗಮನಿಸಿದರೆ ಎರಡನೇ ವರ್ಷ ಇನ್ನೂ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಕುರಿತು ಮಾತನಾಡಿ, ಭಾರತದ ಪರಿಸ್ಥಿತಿಗೆ ವಿಶ್ವ ಸಂಸ್ಥೆ ಸ್ಪಂದಿಸುತ್ತಿದೆ. ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್ ಗಳು, ಮೊಬೈಲ್ ಫೀಲ್ಡ್ ಹಾಸ್ಪಿಟಲ್ ಗಳಿಗಾಗಿ ಟೆಂಟ್ಗಸಳು, ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ಪೂರೈಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಭಾರತವು ಇನ್ನೂ ಮಹಾಮಾರಿ ವಿರುದ್ಧ ಹೋರಾಡಬೇಕಾದ ಅಗತ್ಯವಿದೆ. ಹಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಚಿಂತೆಗೀಡು ಮಾಡುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವುದು ಹಾಗೂ ಸಾವುಗಳನ್ನು ನೋಡಿದರೆ ಭಯವಾಗುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿರುವ ದೇಶಗಳಿಗೆ ವಿಶ್ವ ಸಂಸ್ಥೆ ಧನ್ಯವಾದ ಅರ್ಪಿಸುತ್ತದೆ ಎಂದು ಹೇಳಿದ್ದಾರೆ.
ಈ ಪರಿಸ್ಥಿತಿ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ನೇಪಾಳ, ಶ್ರೀಲಂಕಾ, ವಿಯಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್ ಹಾಗೂ ಈಜಿಪ್ಟ್ ದೇಶಗಳಲ್ಲಿ ಕೂಡ ಇದೆ ಎಂದು ವಿಶ್ವ ಸಂಸ್ಥೆ ಹೇಳಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








