ಮತ್ತೆ ಏರಿಕೆಯಾಗ್ತಿದೆ ದೈನಂದಿನ ಕೇಸ್ ಗಳು, ಸಾವಿನ ಸಂಖ್ಯೆಯಲ್ಲೂ ಭಾರೀ ಹೆಚ್ಚಳ – 3ನೇ ಅಲೆ ಆತಂಕ..?
ನವದೆಹಲಿ : ಮತ್ತೆ ಇದೀಗ ಏರಿಕೆ ಪಥದತ್ತ ಸೈನಂದಿನ ಕೇಸ್ ಗಳ ಸಂಖ್ಯೆ ಸಾಗಿದ್ದುಉ, 3ನೇ ಅಲೆ ಆತಂಕ ಶುರುವಾಗ್ತಿದೆ. ಸಾವಿನ ಸಂಖ್ಯೆ ಕೂಡ ಏರಿಕೆಯಾಗ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 16,156 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಅಲ್ಲದೆ 733 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,42,15,653 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 456386 ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,60,989 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 17,095 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,14,434 ಕ್ಕೆ ತಲುಪಿದೆ.
ದೇಶದಲ್ಲಿ ಈವರೆಗೆ ಒಟ್ಟು 1,04,04,99,873 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.