ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 18,346 ಕೇಸ್ ಪತ್ತೆ Corona Report
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,346 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, 263 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 33,853,048 ಕ್ಕೆ ತಲುಪಿದ್ದು, ಹೆಮ್ಮಾರಿ ಸೋಂಕಿನಿಂದ ಕೊನೆಯುಸಿರೆಳೆದವರ ಸಂಖ್ಯೆ 4,49,260 ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 29,639 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,31,50,886 ಕ್ಕೆ ತಲುಪಿದೆ. ದೇಶದಲ್ಲಿನ್ನೂ 2,52902 ಸಕ್ರಿಯ ಪ್ರಕರಣಗಳಿವೆ. ನಿನ್ನೆ ದೇಶದಲ್ಲಿ 11,41,642 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,51,419 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 91,54,65,826 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.