ನವದೆಹಲಿ : ದೇಶದಲ್ಲಿ ದಿನೇ ದಿನೇ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗ್ತಿದೆ.. ದೈನಂದಿನ ಕೇಸ್ ಗಳ ಸಂಖ್ಯೆ ಹೆಚ್ಚಾಗ್ತಿದೆ.. ಕಳೆದ 24 ಗಂಟೆಗಳಲ್ಲಿ 17,070 ಹೊಸ ಪ್ರಕರಣಗಳು ವರದಿಯಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್–19 ಸಕ್ರಿಯ ಪ್ರಕರಣಗಳ ಸಂಖ್ಯೆ 1.07 ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 4 ಕೋಟಿ 34 ಲಕ್ಷಕ್ಕೆ ತಲುಪಿದೆ. ಈ ಪೈಕಿ 4 ಕೋಟಿ 28 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ಕೋವಿಡ್ನಿಂದಾಗಿ ಇದುವರೆಗೆ 5,25,139 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 14,413 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.. ದೈನಂದಿನ ಸೋಂಕು ಪಾಸಿಟಿವಿಟಿ ರೇಟ್ ಶೇ 3.40 ರಷ್ಟು ಏರಿದೆ..