ಕಳೆದ 24 ಗಂಟೆಗಳಲ್ಲಿ 10,197 ಹೊಸ ಪ್ರಕರಣಗಳು ಪತ್ತೆ..!
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,865 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
301 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,44,66,598 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,64,153ಕ್ಕೆ ತಲುಪಿದೆ.
ಭಾರತದಲ್ಲಿ ಚೇತರಿಕೆಯ ಪ್ರಮಾಣವು ಪ್ರಸ್ತುತ 98.28% ರಷ್ಟಿದೆ, ಇದು ಮಾರ್ಚ್ 2020 ರಿಂದ ಅತ್ಯಧಿಕವಾಗಿದೆ.
12,134 ಮಂದಿ ನಿನ್ನೆ ಗುಣಮುಖರಾಗಿದ್ದಾರೆ..
ಒಟ್ಟು ಗುಣಮುಖರ ಸಂಖ್ಯೆ 33,873,890 ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,28,555 ಕ್ಕೆ ಇಳಿಕೆಯಾಗಿದೆ.








